alex Certify BREAKING NEWS: ಬೆಳ್ಳಂಬೆಳಗ್ಗೆ PFI ಕಾರ್ಯಕರ್ತರಿಗೆ ಶಾಕ್: ಶಾಂತಿ ಕದಡಲು ಯತ್ನಿಸಿದ 6 ಜನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ PFI ಕಾರ್ಯಕರ್ತರಿಗೆ ಶಾಕ್: ಶಾಂತಿ ಕದಡಲು ಯತ್ನಿಸಿದ 6 ಜನ ವಶಕ್ಕೆ

ಬಾಗಲಕೋಟೆ: ಬೆಳ್ಳಂಬೆಳಗ್ಗೆ ಬಾಗಲಕೋಟೆಯಲ್ಲಿ ಆರು ಜನ ಪಿಎಫ್ೈ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಜನ ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬನಹಟ್ಟಿ, ಇಳಕಲ್, ಜಮಖಂಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಜಮಖಂಡಿಯಲ್ಲಿ 4, ಇಳಕಲ್ ಮತ್ತು ಬನಹಟ್ಟಿಯಲ್ಲಿ ತಲಾ ಒಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಡಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಾಗಲಕೋಟೆ ಪೊಲೀಸ್ ವರಿಷ್ಠ ಅಧಿಕಾರಿ ಜಯಪ್ರಕಾಶ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...