alex Certify ನೀರು ತರಲು ಹೋದ ಯುವತಿಗೆ ವಿದ್ಯುತ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ತರಲು ಹೋದ ಯುವತಿಗೆ ವಿದ್ಯುತ್ ಶಾಕ್

ಬಾಗಲಕೋಟೆ: ಬನಹಟ್ಟಿಯ ಮುಖ್ಯರಸ್ತೆಯ ವಿಠಲ ಮಂದಿರ ಸಮೀಪ ನಗರಸಭೆ ಬೋರ್ ವೆಲ್ ನಿಂದ ನೀರು ತರಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಬನಹಟ್ಟಿಯ ಚಿನ್ನಾಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತಿರುವ ರಾಮಪುರ ನಿವಾಸಿ ಶ್ರುತಿ(24) ವಿದ್ಯುತ್ ಆಘಾತಕ್ಕೆ ಒಳಗಾದವರು. ವಿದ್ಯುತ್ ಪ್ರವಹಿಸಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಗಮನಿಸಿದ ಸ್ಥಳೀಯರು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರುತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ನಗರಸಭೆ ವತಿಯಿಂದ ಚಿಕಿತ್ಸೆಯ ವೆಚ್ಚ ಪಾವತಿಸಲಾಗುವುದು ಎಂದು ಪೌರಾಯುಕ್ತರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...