alex Certify ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಕಾರ್ ನೂರು ಮೀಟರ್ ದೂರದಲ್ಲಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊಕ್ಕುಂಡಿ ಗ್ರಾಮದ ಹನುಮಂತ(38), ಅಮೋಘ(26), ಬಾಗಲಕೋಟೆ ಜಿಲ್ಲೆ ರಬಕವಿ –ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ಮಹಾದೇವ(32) ಹಾಗೂ ಅವರ ತಾಯಿ ಯಮನವ್ವ(58) ಮೃತಪಟ್ಟವರೆಂದು ಹೇಳಲಾಗಿದೆ. ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...