ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಕಾರ್ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದಾಗ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.