
ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 163 ತಾಲೂಕುಗಳಲ್ಲಿ ರಚಿಸಿದ ಬಗರ್ ಹುಕುಂ ಸಮಿತಿಗಳಿಗೆ 4.38 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ. ಫಲಾನುಭವಿಗಳಿಗೆ ಮಾಲೀಕತ್ವದ ಹಕ್ಕನ್ನು ಡಿಜಿಟಲೀಕರಣ ಮಾಡಿಕೊಡಲಾಗುತ್ತದೆ. ಅರ್ಹ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.