ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣ ಸಂಬಂಧಿಸಿದಂತೆ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ 23 ನೇ ಹೆಚ್ಚುವರಿ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 60 ದಿನಗಳ ಒಳಗೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಕಡ್ಡಾಯ ಜಾಮೀನು ಮಂಜೂರು ಮಾಡಲಾಗಿದೆ. 2022ರ ಜುಲೈ 4 ರಂದು ಮಂಜುನಾಥ್ ಅವರನ್ನು ಎಸಿಬಿ ಬಂಧಿಸಿತ್ತು.
ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಆಜಂ ಪಾಶ ಎಂಬುವವರಿಂದ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಲಂಚ ಪಡೆದುಕೊಂಡಿದ್ದರು ಎನ್ನಲಾಗಿತ್ತು.