ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಪೊಲೀಸರು ಹಾಜರುಪಡಿಸಲಿದ್ದು, ಅವರೆಲ್ಲರೂ ಜಾಮಿನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ದರ್ಶನ್ ಗೆ ವಿಶೇಷ ಆತಿಥ್ಯ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಪೊಲೀಸರು ಕೋರ್ಟ್ ಅನುಮತಿ ಪಡೆದು ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಿದ್ದಾರೆ.
ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ಜಾಮಿನಿನ ಬಗ್ಗೆ ಆರೋಪಿಗಳು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ. ಪವಿತ್ರಾ ಗೌಡ ಜಮೀನು ಅರ್ಜಿ ಹಿಂದೆ ತಿರಸ್ಕೃತಗೊಂಡಿತ್ತು. ಈಗ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.