
ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸೇರಿದ ತೋಟದ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 11 ಕೃಷ್ಣಮೃಗ ಸೇರಿದಂತೆ ಅನಧಿಕೃತವಾಗಿ 30 ವನ್ಯಜೀವಿಗಳನ್ನು ಸಾಕಣೆ ಮಾಡಿದ್ದು ಬೆಳಕಿಗೆ ಬಂದಿತ್ತು.