ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ನೋಟಿಸ್ ಬೆನ್ನಲ್ಲೇ ಇದೀಗ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೂ ಇಡಿ ನೋಟಿಸ್ ಜಾರಿ ಮಾಡಿದೆ.
ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಇದೀಗ ಸಚಿವ ಭೈರತಿ ಸುರೇಶ್ ಅವರಿಗೂ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.