ನವದೆಹಲಿ: ಜೂನ್ 2 ರಂದು ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ರೈಲ್ವೇ ಅಧಿಕಾರಿಗಳ ವಿರುದ್ಧ ಶನಿವಾರ ಕೇಂದ್ರೀಯ ತನಿಖಾ ದಳ(ಸಿಬಿಐ) ಚಾರ್ಜ್ ಶೀಟ್ ಸಲ್ಲಿಸಿದೆ.
ಈ ಅಪಘಾತದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಜುಲೈ 7 ರಂದು ಹಿರಿಯ ಸೆಕ್ಷನ್ ಇಂಜಿನಿಯರ್(ಸಿಗ್ನಲ್) ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಬಂಧಿಸಿತ್ತು. ಮೂರು ರೈಲುಗಳಲ್ಲಿ 296 ಜನರು ಸಾವನ್ನಪ್ಪಿದರು ಮತ್ತು 1,200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಜುಲೈನಲ್ಲಿ ವಿಶೇಷ ನ್ಯಾಯಾಲಯ ಮೂವರು ರೈಲ್ವೇ ಅಧಿಕಾರಿಗಳನ್ನು ಅವರ ಸಿಬಿಐ ರಿಮಾಂಡ್ ಅವಧಿ ಮುಗಿದ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.