
ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಲಕುಂದಿ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18) ಹಾಗೂ ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ(22) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಈ ವಿದ್ಯಾರ್ಥಿಗಳು ಬಳ್ಳಾರಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಸ್ಟೆಲ್ ವಿದ್ಯಾರ್ಥಿಗಳಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.