alex Certify BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹನುಮಂತಪ್ಪ, ಹೊಳಿಯಮ್ಮ, ಲಕ್ಷ್ಮಮ್ಮ ಮೃತಪಟ್ಟವರು ಎನ್ನಲಾಗಿದೆ. ಇವರು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹೊಡಿಗೇರಹಳ್ಳಿಯವರಾಗಿದ್ದು ಕಾರ್ಯಕ್ರಮವೊಂದಕ್ಕೆ ಕುಟುಂಬದವರು ತೆರಳುತಿದ್ದರು.

ರಸ್ತೆಬದಿ ಟ್ರ್ಯಾಕ್ಟರ್ ನಿಲ್ಲಿಸಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...