
ಬಳ್ಳಾರಿ: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಘನಘೋರ ದುರಂತ ಸಂಭವಿಸಿದೆ. ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ವಿದ್ಯುತ್ ಸ್ಥಗಿತಗೊಂಡು ವೆಂಟಿಲೇಟರ್ ನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ.
ಹಾವು ಕಡಿತದಿಂದ ಒಬ್ಬರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬರು ಮತ್ತು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಇನ್ನೊಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.