ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಲೋಕೇಶ್ ನಿವಾಸ ಮಾತ್ರವಲ್ಲದೇ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದ್ದು, ಚಿನ್ನಾಭರಣ, ನಗದು ಆಸ್ತಿ ದಾಖಲೆ ಪತ್ರಗಳ ಪರಿಶೀಲಿಸಲಾಗಿದೆ ಎನ್ನಲಾಗಿದೆ.
ಗದಗ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆದಿದೆ. ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಚೇರಿ, ತೋಟದ ಮನೆ ಮೇಲೆ ದಾಳಿ ನಡೆದಿದೆ. ಗದಗ, ಗಜೇಂದ್ರಗಢ, ಬಾಗಲಕೋಟೆ ಸೇರಿದಂತೆ 5 ಕಡೆ ದಾಳಿ ನಡೆಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.