ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ.
ನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು, ಮಹಾನಗರ ಪಾಲಿಕೆ ಕಾರ್ಯಾಲಯದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು.
ಸಾರ್ವಜನಿಕರ ಸ್ಥಳಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಬಳಸಿದ್ದಲ್ಲಿ ಅಂತವರ ವಿರುದ್ಧ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆದಾರರು ಪರವಾನಗಿ ಪಡೆಯದೇ ಇತರೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.