ಬಳ್ಳಾರಿ: ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬಳ್ಳಾರಿಗೆ ಬಂದು ಸಮಾವೇಶ ಮಾಡುತ್ತಿದ್ದಾರೆ. ಈ ಹಿಂದೆ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಜಯಗಳಿಸಿದ್ದರು. ಆದರೆ, ಇಲ್ಲಿನ ಜನರಿಗೆ ಧನ್ಯವಾದ ಕೂಡ ಹೇಳದೇ ರಾಜೀನಾಮೆ ನೀಡಿದ್ದರು ಎಂದು ಟೀಕಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪದಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಗೆದ್ದ ನಂತರ ಬಳ್ಳಾರಿಗೆ ಬರಲಿಲ್ಲ. ಈಗ ಅವರ ಮಗ ರಾಹುಲ್ ಗಾಂಧಿ ಬರುತ್ತಿದ್ದಾರೆ. ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಕರೆದುಕೊಂಡು ಬರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಾಲು ಸಾಲು ಭ್ರಷ್ಟಾಚಾರ ಮಾಡಿದೆ. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೆರೆಕಟ್ಟೆಗಳು ಭರ್ತಿಯಾಗುತ್ತಿವೆ. ರಾಹುಲ್ ಗಾಂಧಿ ಬಳ್ಳಾರಿಗೆ ಬಂದಾಗ ಭ್ರಷ್ಟಾಚಾರದ ಬಗ್ಗೆ ಉತ್ತರಿಸಲಿ ಎಂದು ಹೇಳಿದ್ದಾರೆ.