ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 24ರ ವರೆಗೆ ಸಂಪೂರ್ಣ ಜಾರಿ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.
ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇಂದಿನಿಂದ ಎರಡು ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದು, ಬೆಳಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.
10 ಗಂಟೆಯ ನಂತರ ಸಂಪೂರ್ಣ ಬಂದ್ ಮಾಡಲಿದ್ದು, ಮೆಡಿಕಲ್ ಎಮರ್ಜೆನ್ಸಿ ಹೊರತುಪಡಿಸಿ ಎಲ್ಲ ಚಟುವಟಿಕೆಗೆ ನಿಷೇಧ ಹೇರಲಾಗಿದೆ. ಮದುವೆಗಳಿಗೂ ನಿಷೇಧ ಹೇರಲಾಗಿದ್ದು, ಅಂತರರಾಜ್ಯ ಗೂಡ್ಸ್ ವಾಹನಗಳಿಗೆ ಮಾತ್ರ ಅನುಮತಿ ಇರುತ್ತದೆ. ಉಳಿದಂತೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.