ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಂದ್ ಆಗುತ್ತಿದ್ದು, ಅವ್ಯವಸ್ಥೆಯ ಆಗರಗಳಾಗಿವೆ.
ಬಳ್ಳಾರಿ ನಗರದಲ್ಲಿ ಒಟ್ಟು 8 ಇಂದಿರಾ ಕ್ಯಾಂಟೀನ್ ಗಳು ಬಂದ್ ಆಗಿವೆ. ಸರ್ಕಾರದಿಂದ 3.38 ಕೋಟಿ ಬಿಲ್ ಬಾಕಿ ಇರುವ ಹಿನ್ನೆಲೆಯಲ್ಲಿ ನಿರ್ವಹಣೆ ಸಾಧ್ಯವಾಗದೇ ಕ್ಯಾಂಟೀನ್ ಗಳು ಮುಚ್ಚಿವೆ.
ಗ್ಯಾರಂಟಿ ಯೋಜನೆಗಳಿಂದಾಗಿ ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಳ್ಳಾರಿ ನಗರದ ಜಿಲ್ಲಾಸ್ಪತ್ರೆ, ವಿಮ್ಸ್, ಮೋತಿ ವೃತ್ತ, ಎಪಿಎಂ ಸಿ ಆವರಣದ ಕ್ಯಾಂಟೀನ್ ಗಳು ಮುಚ್ಚಿವೆ. ಬಳ್ಳಾರಿ ನಗರವೊಂದರಲ್ಲೇ 3.38 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿವೆ. 2021ರಿಂದಲೇ ಕೋಟಿ ಕೋಟಿ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದೆ. ಇದರಿಂದಾಗಿ ನಿರ್ವಹಣೆ ಸಾಧ್ಯವಾಗದೇ ಇಂದಿರಾ ಕ್ಯಾಂಟೀನ್ ಗಳು ಸ್ಥಗಿತಗೊಳ್ಳುತ್ತಿವೆ.