alex Certify BIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಣಂತಿಯರ ಸಾವು ಪ್ರಕರಣ: ಸಮಿತಿ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದರು.

ಬಳ್ಳಾರಿಯಲ್ಲಿ ನಾಲ್ವರು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.

ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...