
ಬಳ್ಳಾರಿ: ರೈತರ ಜಮೀನುಗಳಲ್ಲಿ ಅಳವಡಿಸಿದ್ದ ವಿಂಡ್ ಫ್ಯಾನ್ ಗೆ ಏಕಾಏಕಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಿರಾಳ್ ಗ್ರಾಮದಲ್ಲಿ ನಡೆದಿದೆ.
ರಾಜ್ಯದಲ್ಲಿ ಒಂದೆಡೆ ಬಿಸಿಲ ಧಗೆ, ಮತ್ತೊಂದೆಡೆ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ಹಿರಾಳ್ ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಅಳವಡಿಸಲಾಗಿದ್ದ ವಿಂಡ್ ಫ್ಯಾನ್ ಗೆ ಬೆಂಕಿ ಬಿದ್ದು, ನೋಡ ನೋಡುತ್ತಿದ್ದಂತೆಯೇ ಸುಟ್ಟು ಭಸ್ಮವಾಗಿದೆ.
ಜಮೀನು ಸುತ್ತಮುತ್ತಲು ದಟ್ಟ ಹೊಗೆ ಆವರಿಸಿದೆ. ರೈತರ ಜಮೀನಿನಲ್ಲಿ ಖಾಸಗಿ ಕಂಪನಿಯೊಂದು ವಿಂಡ್ ಫ್ಯಾನ್ ಅಳವಡಿಸಿತ್ತು. ಈ ಫ್ಯಾನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಚೋರನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.