ಬೆಂಗಳೂರು : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ಸೆ.6 ರಂದು ಬೆಂಗಳರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಜಂಟಿ ನಿರ್ದೇಶಕರು (ಪಶುಪಾಲನೆ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರು ಆದೇಶ ಹೊರಡಿಸಿದ್ದು, ದಿನಾಂಕ: 06-09-2023ರ ಬುಧವಾರ “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಕೃಷ್ಣಾ ಜನ್ಮಾಷ್ಟಮಿ” ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
