alex Certify BREAKING : ನಟ ದರ್ಶನ್ ವಿರುದ್ಧದ ಚಾರ್ಜ್ ಶೀಟ್ ವರದಿಯ ಸುದ್ದಿ ಬಿತ್ತರಿಸಬೇಡಿ : ಮಾಧ್ಯಮಗಳಿಗೆ ಹೈಕೋರ್ಟ್ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ವಿರುದ್ಧದ ಚಾರ್ಜ್ ಶೀಟ್ ವರದಿಯ ಸುದ್ದಿ ಬಿತ್ತರಿಸಬೇಡಿ : ಮಾಧ್ಯಮಗಳಿಗೆ ಹೈಕೋರ್ಟ್ ಆದೇಶ..!

ಬೆಂಗಳೂರು : ನಟ ದರ್ಶನ್ ಕ್ರೌರ್ಯದ ಬಗ್ಗೆ ಸುದ್ದಿ ಬಿತ್ತರಿಸಿದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಬಗ್ಗೆ ಸುದ್ದಿ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.

ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪೊಲೀಸ್ ಇಲಾಖೆ ಸಲ್ಲಿಸಿರುವ ಆರೋಪಪಟ್ಟಿಯ ವಿವರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗೂ ಈ ಆದೇಶವನ್ನು ಉಲ್ಲಂಘಿಸಿದ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಸೂಚನೆ ನೀಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...