ಮಡಿಕೇರಿ : ಜೂನ್ 1 ರ ಸಂಜೆ 5 ಗಂಟೆಯಿಂದ ಜೂನ್, 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10ಬಿ ಅಡಿಯಲ್ಲಿ ಪ್ರತ್ಯಾಯೊಜಿತವಾಗಿರುವ ಅಧಿಕಾರದಂತೆ ಜೂನ್, 01 ರ ಸಂಜೆ 5 ಗಂಟೆಯಿಂದ ಜೂನ್, 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.