ಶಿವಮೊಗ್ಗ : ಗಾಂಧಿ ಜಯಂತಿ ಪ್ರಯುಕ್ತ ಅ.2 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇಧಿಸಿದ್ದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.