ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.