ಬೆಂಗಳೂರು: ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ 36 ಕಡೆ ಕಬಾಬ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಯೆಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದೆ. ಈ ಕುರಿತಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿತ್ತು. ಕಾಟನ್ ಕ್ಯಾಂಡಿ, ಗೋಬಿ ಬಳಿಕ ಕಬಾಬ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಬಾಬ್ ಗೆ ಕೃತಕ ಬಣ್ಣ ಬಳಕೆ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಪ್ರಕಾರ ನಿಯಮ ಉಲ್ಲಂಘಿಸಿದಲ್ಲಿ ಏಳು ವರ್ಷದಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎನ್ನಲಾಗಿದೆ.