
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ಬಾನ ದಾರಿಯಲ್ಲಿ’ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದ್ದು ಮುಂದಿನ ತಿಂಗಳು ಸೆಪ್ಟೆಂಬರ್ 15ಕ್ಕೆ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ರಿಲೀಸ್ ಮಾಡುವುದಾಗಿ ಇತ್ತೀಚಿಗೆ ಮಾಧ್ಯಮದಲ್ಲಿ ತಿಳಿಸಿದ್ದ ಚಿತ್ರತಂಡ ಇಂದು ದಿನಾಂಕವನ್ನು ಘೋಷಣೆ ಮಾಡಿದೆ.
ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕ್ರಿಕೆಟ್ ಆಟಗಾರನಿಗೆ ಕಾಣಿಸಿಕೊಂಡಿದ್ದು, ರೀಷ್ಮಾ ನಾಣಯ್ಯ ಹಾಗೂ ರುಕ್ಮಿಣಿ ವಸಂತ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರವನ್ನು ಶ್ರೀ ವಾರೆ ಟಾಕೀಸ್ ಬ್ಯಾನರ್ ನಡಿ ವೇಣು ಮತ್ತು ಸಂತೋಷ್ ನಿರ್ಮಾಣ ಮಾಡಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದ್ದು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
