ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ, ಜಯನಗರ ಬಳಿಕ ಈಗ ಬನಶಂಕರಿ ಬಳಿಯ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಪಾಲಿಕೆ ಮುಂದಾಗಿದೆ.
ಬನಶಂಕರಿ ವ್ಯಾಪ್ತಿಯ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬನಶಂಕರಿ ಕಾಂಪ್ಲೆಕ್ಸ್ ಸುತ್ತಮುತ್ತ ಇರುವ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ.
ಮಾರ್ಷಲ್ ಸೂಪರ್ ವೈಸರ್ ಸೋಮಶೇಖರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ನೋಟಿಸ್ ನೀಡಿದರೂ ಕೆಲ ಅಂಗಡಿಗಳು ತೆರವು ಮಾಡಿಲ್ಲ ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳೇ ಇಂದು ಖುದ್ದು ತೆರವು ಕಾರ್ಯಾಚರಣೆ ನಡೆಸಿದ್ದಾರೆ.