ಬೆಳಗಾವಿ: ಮತಾಂತರ ನಿಷೇಧ ವಿಧೇಯಕವನ್ನು ಜೆಡಿಎಸ್ ಪಕ್ಷ ವಿರೋಧಿಸಿತ್ತು. ಮತಾಂತರ ಬಿಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗೊಂದಲ ಸೃಷ್ಟಿಸಿದೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಕಚೇರಿಯಲ್ಲಿ ಕಾಂಗ್ರೆಸ್, ಬಿಜೆಪಿ ಸದಸ್ಯರು ಮಾತನಾಡಿದ್ದು, ನಂತರ ಮತಾಂತರ ನಿಷೇಧ ಬಿಲ್ ನಾವೇ ಮಾಡಿದ್ದು ಎಂದು ಹೇಳಿದ್ದರು. ಬಿಲ್ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಟಕ ಬಯಲಾಗಿದೆ. ಸದನದಲ್ಲಿ ಸಚಿವ ಈಶ್ವರಪ್ಪ ನೀಡಿದ ಹೇಳಿಕೆಯನ್ನು ಖಂಡಿಸುವೆ. ಯಾವುದೋ ಹಿಡನ್ ಅಜೆಂಡಾ ಇಟ್ಟುಕೊಂಡು ಬಿಲ್ ತಂದಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಸೇರಿ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.