ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಎರಡು ಬಸ್ ಗಳು ಮತ್ತು ಆಂಬುಲೆನ್ಸ್ ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ .
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಿಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ನಮ್ಮ ಪಕ್ಷದ ಅನೇಕ ನಾಯಕರ ಒತ್ತಾಯದ ಮೇರೆಗೆ ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿಯ ವೇಳೆ ಎರಡು ಬಸ್ ಮತ್ತು ಆಂಬುಲೆನ್ಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.