alex Certify ಮಮತಾ ಬ್ಯಾನರ್ಜಿಗೆ ಭರ್ಜರಿ ಮುನ್ನಡೆ, ಗೆಲುವು ಖಚಿತವಾಗ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಮತಾ ಬ್ಯಾನರ್ಜಿಗೆ ಭರ್ಜರಿ ಮುನ್ನಡೆ, ಗೆಲುವು ಖಚಿತವಾಗ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಕೊಲ್ಕೊತ್ತಾ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರಿಂದ ಸುಮಾರು 34 ಸಾವಿರ ಮತಗಳಿಂದ ಮಮತಾ ಬ್ಯಾನರ್ಜಿ ಮುನ್ನಡೆ ಕಾಯ್ದುಕೊಂಡಿದ್ದು, ಅವರ ಗೆಲುವು ನಿಶ್ಚಿತವಾಗಿದೆ. ಮಮತಾ ಬ್ಯಾನರ್ಜಿ ಭಾರಿ ಮುನ್ನಡೆ ಗಳಿಸುತ್ತಿದ್ದಂತೆ ಟಿಎಂಸಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮಮತಾ ಬ್ಯಾನರ್ಜಿ 34 ಸಾವಿರ ಮತಗಳಿಂದ ಮುಂದಿದ್ದಾರೆ. ಇದರೊಂದಿಗೆ ಅವರ ಬೆಂಬಲಿಗರ ಸಂಭ್ರಮಾಚರಣೆಯೂ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...