ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ’ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ನಂತರ ಮಾತನಾಡಿದರು.
ಕೃಷಿ ಮೇಳದಲ್ಲಿ ಅತ್ಯಂತ ಸಂತೋಷದಿಂದ ಭಾಗಿಯಾಗಿದ್ದೇನೆ. ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿಶ್ವ ವಿದ್ಯಾಲಯವಾಗಿದೆ. ರಾಜ್ಯದ ಹೆಚ್ಚಿನ ಜನರು ಕೃಷಿ ಮೇಲೆ ಅವಲಂಬಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಏನೆಲ್ಲ ತಂತ್ರಜ್ಞಾನ ಇರುತ್ತೆ? ನೀರಿನ ಸಂರಕ್ಷಣೆ ಹೇಗೆ ? ಎಂಬ ವಿಷಯವನ್ನ ತಿಳಿಸುವ ಕೆಲಸ ವಿಶ್ವವಿದ್ಯಾನಿಲಯ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದಿನಿಂದ ನವೆಂಬರ್ 20ರವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ ಮೇಳ ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದಡಿ ನಡೆಯಲಿದೆ.