ಅಯೋಧ್ಯೆ: ಉತ್ತರ ಪ್ರದೇಶದ ಲಖ್ನೌದ ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆ ಬೆನ್ನಲ್ಲೇ ಬೆಂಗಳೂರು-ಅಯೊಧ್ಯೆ ನಡುವೆ ಸಂಚರಿಸುವ ವಿಮಾನಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರು-ಅಯೋಧ್ಯೆ ನಡುವಿನ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನವನ್ನು ಅಯೋಧ್ಯೆ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ನಡೆಸಲಾಗಿದೆ.
ಪರಿಶೀಲನೆ ಬಳಿಕ ವಿಮಾನದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅಯೋಧ್ಯೆ ವಿಮಾನ ನಿಲ್ದಾಣ ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ.