ಬೆಂಗಳೂರು: ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಮಧ್ಯೆ ಸಾರಿಗೆ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವುದಾಗಿ ತಿಳಿಸಿವೆ.
ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಬೆಂಬಲ ಘೋಷಿಸಿದೆ. ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ. ಅಂದು ಸಾರಿಗೆ ಬಸ್ ಗಳನ್ನು ರೋಡಿಗೆ ಇಳಿಸುವುದಿಲ್ಲ ಎಂದು ಕೆ.ಎಸ್.ಆರ್. ಟಿ.ಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತಸುಬ್ಬರಾವ್ ತಿಳಿಸಿದ್ದಾರೆ.
ಇದೇ ವೇಳೆ ಬೆಂಗಳೂರು ಬಂದ್ ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ಘೋಷಿಸಿವೆ. ನೆಲ, ಜಲ, ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.
ಇನ್ನು ಈಗಾಗಲೇ ಬೆಂಗಳೂರು ಬಂದ್ ಗೆ ಓಲಾ, ಊಬರ್ ಸೇರಿದಂತೆ ಕ್ಯಾಬ್ ಸಂಸ್ಥೆಗಳು ಬೆಂಬಲ ಘೋಷಿಸಿದ್ದು, ಒಟ್ಟಾರೆ ಕಾವೇರಿ ನೀರಿಗಾಗಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ.