
ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಸಿದ್ಧತೆ ನಡೆಯುತ್ತಿದೆ. ಮಾರ್ಚ್ 1ರಿಂದ ಫಿಲ್ಮ್ ಫೆಸ್ಟಿವಲ್ ಆರಂಭವಾಗಲಿದೆ. ಈ ಮಧ್ಯೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಸಿನಿಮಾ ಆಯ್ಕೆ ಪ್ರಕ್ರಿಯಯಲ್ಲಿ ಲೋಪವೆಸಗಲಾಗಿದೆ ಎಂದು ಆರೋಪಿಸಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿನಿಮಾಗಳ ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿ 9 ಸಿನಮಾ ನಿರ್ಮಾಣ ಸಂಸ್ಥೆಗಳು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿವೆ. ತಮ್ಮ ಸಿನಿಮಾಗಳನ್ನು ಫಿಲ್ಮ್ ಫೆಸ್ಟಿವಲ್ ಗೆ ಪರಿಗಣಿಸಿಲ್ಲ. ಸಿನಿಮಗಳನ್ನು ವೀಕ್ಷಿಸದೇ ಆಯ್ಕೆ ಅಂತಿಮಗೊಳಿಸಲಾಗಿದೆ ಎಂದು ಆರೋಪಿಸಿವೆ.
ಫಿಲ್ಮ್ ಫೆಸ್ಟಿವಲ್ ಗೆ ಸಿನಿಮಾಗಳ ಆಯ್ಕೆ ಸರಿಯಾಗಿ ಆಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆಯನ್ನು ಫೆ.24ಕ್ಕೆ ನಿಗದಿಪಡಿಸಿದೆ.