ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಐಫೋನ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಫ್ತಿ ಮಾಡಿದ್ದಾರೆ.
ಬ್ಯಾಂಕಾಕ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಐಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕನೊಬ್ಬನ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ 34 ಲಕ್ಷ ಮೌಲ್ಯದ 23 ಐಫೋನ್ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.