ಬೆಂಗಳೂರಿನ ವಾಹನ ಸವಾರರೇ ಗಮನಿಸಿ , ಫೆ.28 ರಿಂದ 1 ವಾರ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್ ಆಗಲಿದೆ.
ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ: 28.02.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಪ್ರಾಯೋಗಿಕವಾಗಿ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ
+ ಕಾಡುಬೀಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ
• ಕಾಡುಬೀಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ವಾಹನಗಳು ದೇವರಬೀಸನಹಳ್ಳಿ ಜಂಕ್ಷನ್ ಕಡೆಗೆ ಸಂಚರಿಸಿ ಯು ಟರ್ನ್ ಪಡೆದು ಸಕ್ರಾ ಆಸ್ಪತ್ರೆ ಮುಖ್ಯ ರಸ್ತೆ ಮೂಲಕ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸಬಹುದಾಗಿದೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) February 25, 2025