
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ 21 ವರ್ಷದ ವಿಶ್ವ ಹಾಗೂ ಸೂರ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಸುಹಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ವಿದ್ಯಾರ್ಥಿಗಳು ಆಂಧ್ರ ಮೂಲದವರಾಗಿದ್ದು, ಬೆಂಗಳೂರಿನ ವಿದ್ಯಾನರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು. ಮೈಸೂರಿಗೆ ಹೋಗಿದ್ದ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಮನಗರ ಸಂಚಾರಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.