
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ 5 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಇತರ ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿವೆ. ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.