alex Certify BIG NEWS: ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ಬೆಂಗಳೂರು ಉತ್ತರ ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ಬೆಂಗಳೂರು ಉತ್ತರ ವಿವಿ

ಬೆಂಗಳೂರು: ರಾಜ್ಯದಲ್ಲಿ ಸಾಲು ಸಾಲು ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬರುತ್ತಿದ್ದು, ಬಿಕಾಂ, ಬಿಸಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ.

ಇಂದು ಮೊದಲ ಸೆಮಿಸ್ಟರ್ ನ ಬಿಕಾಂ, ಬಿಸಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ಕುಲಸಚಿವರು ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಎಕ್ಸಾಂ ಸೆಂಟರ್ ಗೆ ಬಂದ ವಿದ್ಯಾರ್ಥಿಗಳು ಮನೆಗೆ ವಾಪಸ್ ಆಗಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...