ಬೆಂಗಳೂರು : ಬೆಂಗಳೂರಿನ ಫರ್ಪ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗದ ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದ ಫರ್ಪ್ಯೂಮ್ ಫ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದರು. ಘಟನೆ ಸಂಬಂಧ ಜಾಗದ ಮಾಲೀಕ ವಿಠಲ್ ತಲೆಮರೆಸಿಕೊಂಡಿದ್ದು, ಎಫ್ ಐ ಆರ್ ದಾಖಲಾಗಿದೆ. ಗೋಡೌನ್ ನಲ್ಲಿ ಸಲೀಂ ಎಂಬಾತ ಫರ್ಪ್ಯೂಮ್ ಶೇಖರಿಸಿಟ್ಟಿದ್ದನು.
ಘಟನೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದರು. ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.