ಬೆಂಗಳೂರು: ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ವಾರ್ನಿಂಗ್ ಕೊಟ್ಟಿದ್ದಾರೆ.
ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಕಮಿಷನರ್ ದಯಾನಂದ್, ವರ್ಗಾವಣೆ ವಿಚರವಾಗಿ ಸಾಕಷ್ಟು ಸಿಬ್ಬಂದಿಗಳು ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆಯನ್ನು ಮಾಡುತ್ತೇವೆ. ಕಚೇರಿಗೆ ಬರುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿದಿನ ಸಿಬ್ಬಂದಿ ಕವೇರಿಗೆ ಬರುವುದರಿಂದ ಇದೇ ಕೆಲಸವಾಗಿಬಿಡುತ್ತೆ. ಇದನ್ನು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ನಿಮ್ಮನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.