ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಇದಾದ ಬಳಿಕ ನಟಿ ಹೇಮಾ ಸೇರಿ 85 ಕ್ಕೂ ಹೆಚ್ಚು ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ನಟಿ ಹೇಮಾ ಸೇರಿ 85 ಮಂದಿ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ಧೃಡವಾಗಿದ್ದು, ಈ ಹಿನ್ನೆಲೆ ನಟಿ ಹೇಮಾ ಸೇರಿ 85 ಕ್ಕೂ ಹೆಚ್ಚು ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲು CCB ಪೊಲೀಸರು ಸಿದ್ದತೆ ನಡೆಸಿದ್ದಾರೆ. ಕೆಲವೇ ದಿನಗಳಲ್ಲಿ ಕೋರ್ಟ್ ಗೆ CCB ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಈ ಸಂಬಂಧ ಹಲವರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ನಡೆದಿತ್ತು. ಪ್ರಕರಣದಲ್ಲಿ. ಜೂನ್ 3ರಂದು ಹೇಮಾ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು.