
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬ್ಯಾಟರಾಯನಪುರದ ಗಾರ್ಮೆಂಟ್ ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿರುವ ಬ್ಯಾಟರಾಯನಪುರ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.