ಬೆಂಗಳೂರು: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಇಂದು ಐತಿಹಾಸಿಕ ದಿನ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ ಆರಂಭವಾಗಿದೆ.
ಬೆಳಿಗ್ಗೆ 9:45ಕ್ಕೆ ಇಂಡಿಗೋ ಮೊದಲ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸಿದೆ. ಕೆಲ ಹೊತ್ತಲ್ಲೇ ವಿಮಾನ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಲಿದೆ.
72 ಸೀಟ್ ಗಳ ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಶಾಸಕರಾದ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಪ್ರಯಾಣಿಸಿದ್ದಾರೆ. ಅಲ್ಲದೇ ಕೆಲ ರೈತರು ಕೂಡ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.
ಈ ಮೂಲಕ ಬೆಂಗಳೂರು-ಶಿವಮೊಗ್ಗ ನಡುವೆ ಇಂದಿನಿಂದ ವಿಮಾನ ಹಾರಾಟ ಆರಂಭವಾಗಿದ್ದು, ಮಲೆನಾಡಿನ ಜನರ ಹಲವು ವರ್ಷಗಳ ಕನಸು ನನಸಾದಂತಾಗಿದೆ.