ಬೆಂಗಳೂರು: ಸರ್ಕಾರಿ ಫಾರ್ಮಸಿ ಕಾಲೇಜು ಗೋಡೆ ಕುಸಿದು 2 ಬೈಕ್ ಗಳು, 1 ಕಾರು ಜಖಂಗೊಂಡಿರುವ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ.
ಗೋಡೆ ಕುಸಿಯುವ ಬಗ್ಗೆ ಬಿಬಿಎಂಪಿಗೆ ಮೊದಲೇ ಮಾಹಿತಿ ಇತ್ತು ಎನ್ನಲಾಗಿದೆ. ಆದಾಗ್ಯೂ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಕಾಏಕಿ ಗೋಡೆ ಕುಸಿದು ಬಿದ್ದಿದ್ದು, ಎರಡು ಕಾರುಗಳು, ಒಂದು ಬೈಕ್ ಗಳು ಸಂಪೂರ್ಣ್ ಜಖಂಗೊಂಡಿವೆ. ಸ್ಥಳದಲ್ಲೇ ಆಟವಾಡುತ್ತಿದ್ದ ಚಿಕ್ಕ ಮಕ್ಕಳು ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಗೋಡೆ ಶಿಥಿಲಾವಸ್ಥೆಯಲ್ಲಿದ್ದರೂ ತೆರವುಗೊಳಿಸದೇ ನಿರ್ಲಕ್ಷ್ಯವಹಿಸಿರುವ ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.