![](https://kannadadunia.com/wp-content/uploads/2024/01/metro-1.jpg)
ಬೆಂಗಳೂರು : ಫೆ.11 ರ ಇಂದು ಬೆಂಗಳೂರಿನ ನೇರಳೆ ಮಾರ್ಗದಲ್ಲಿ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿಎಂಆರ್’ಸಿಎಲ್ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.
ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳನಡುವೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಿಗ್ಗೆ 07.00 ಗಂಟೆಯಿಂದ ಚಲಿಸುತ್ತವೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಬೆಳಿಗ್ಗೆ 9.00 ಗಂಟೆಯ ನಂತರ ವೈಟ್ಫೀಲ್ಡ್ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ .