ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಜೂನ್ 6 ರಂದು ಕಾವೇರಿ 1, 2 ಮತ್ತು 3 ನೇ ಹಂತಗಳ ನೀರು ಸರಬರಾಜು ಘಟಕಗಳನ್ನು 12 ಗಂಟೆಗಳ ಕಾಲ ಅಂದರೆ ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಹಾಗೂ ಕಾವೇರಿ ನಾಲ್ಕನೇ ಹಂತ, 1 ಮತ್ತು 2ನೇ ಹಂತ ನೀರು ಸರಬರಾಜು ಘಟಕಗಳನ್ನು ನಾಲ್ಕು ಗಂಟೆಗಳ ಕಾಲ (ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ) ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜೂನ್ 6 ಮತ್ತು ಮರುದಿನ ಅಂದರೆ ಜೂನ್ 7ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ನಗರದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಮೊದಲು ಜೂನ್ 4 ರಂದು ಈ ಕಾರ್ಯವನ್ನು ಕೈಗೊಳ್ಳಲು ಸಿದ್ಧತೆ ನಡೆಸಲಾಗಿದ್ದು, ಆದರೆ ಕಾರಣಾಂತರಗಳಿಂದ ಇದನ್ನು ಜೂನ್ 6ಕ್ಕೆ ಮುಂದೂಡಲಾಗಿದೆ. ಹೀಗಾಗಿ ಜೂನ್ 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿನಂತಿಸಿದೆ.