ಬೆಂಗಳೂರು : ಬೆಂಗಳೂರು ನಗರದ ಬಿಬಿಎಂಪಿ ವ್ಯಪ್ತಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಸಿಡಿಸಬಾರದು. ಹಸಿರು ಪಟಾಕಿಯನ್ನೇ ಬಳಸಬೇಕು. ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಹಚ್ಚಲು ಅವಕಾಶವಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಬೆಂಗಳೂರು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ದಿನಗಳಲ್ಲಿ 24 ಗಂಟೆ ಸೇವೆ ನೀಡಲು ಸಜ್ಜಾಗಿವೆ.
ದೀಪಾವಳಿ ಹಬ್ಬದ ವೇಳೆ ಪಟಾಕಿ ಅವಘಡಗಳು ನಡೆದರೆ ದಿನದ 24 ಗಂಟೆಯೂ ಸೇವೆ ನೀಡಲು ಆಸ್ಪತ್ರೆಗಳು ಸಿದ್ದವಾಗಿದೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಹಾಗೂ ವಿಕ್ಟೋರಿಯಾ ಕಣ್ಣಿನ ಆಸ್ಪತ್ರೆ ವೈದ್ಯರು ಒಂದು ವಾರ 24X7 ಕಾರ್ಯನಿರ್ವಹಿಸಲಿದ್ದಾರೆ. ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದು, ಜನರು ತುರ್ತು ಸಹಾಯವಾಣಿ – 9481740137, 08026707176 ಸಂಪರ್ಕಿಸಬಹುದು.