alex Certify ಬೆಂಗಳೂರಿಗರೇ ಗಮನಿಸಿ: ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ: ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ

ಇಡೀ ರಾಜ್ಯಕ್ಕೆ ವ್ಯಾಪಿಸಿದ ಮುಂಗಾರು: ವಾಡಿಕೆಗಿಂತ ಹೆಚ್ಚು ಮಳೆ | More rain than usual in Karnataka after Monsoon enter

ಗುರುವಾರ ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾದ ಮಳೆ, ತಡ ರಾತ್ರಿಯವರೆಗೂ ಸುರಿದಿದ್ದು ಕೆಲವೆಡೆ ಆವಾಂತರ ಸೃಷ್ಟಿಸಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದ ಕಾರಣ ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಟ್ರಾಫಿಕ್ ಜಾಮ್ ನಿಂದ ಪರದಾಡಿದ್ದಾರೆ. ಅಲ್ಲದೆ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಗುಡುಗು ಸಹಿತ ಬಿರುಗಾಳಿಯಿಂದ ಕೂಡಿದ ಮಳೆ ಸುರಿದ ಪರಿಣಾಮ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಇದನ್ನು ಸರಿಪಡಿಸಲು ಬೆಸ್ಕಾಂ ವಾಟ್ಸಾಪ್ ಹೆಲ್ಪ್ ಲೈನ್ ಆರಂಭಿಸಿದೆ. ಬಿಬಿಎಂಪಿ ಕೂಡ 8 ವಲಯಗಳಲ್ಲಿ ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಮ್ ತೆರೆದಿದೆ.

ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಾಹಿತಿ ನೀಡಿದ್ದು, ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಮೇ 12ರ ವರೆಗೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಮೇ 12ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...